logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

*ಗ್ರಾಮಗಳ ಸಮಸ್ಯೆ ಬಗೆಹರಿಸುವಂತೆ ಅಗ್ರಹಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನೆಡೆಸಿದ ಕರ್ನಾಟಕ ಭೀಮ್ ಸೇನೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಲ್ಲೆ ಹಾಗೂ ತಾಲ್ಲೂಕಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ಭೀಮ್ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನೆಡೆಸಲಾಯಿತು.

ಸಂಸ್ಥಾಪಕ ಅಧ್ಯಕ್ಷ ಶಂಕರ್ ರಾಮಲಿಂಗಯ್ಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಜೈ ಭೀಮ್ ಮಂಜುನಾಥ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ತಾಲೂಕಿನ ಹಲವು ಸಮಸ್ಯೆಗಳನ್ನು ಒಳಗೊಂಡಂತೆ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಭೀಮ್ ಸೇನೆ ಸಂಸ್ಥಾಪಕ ಅಧ್ಯಕ್ಷ ಶಂಕರ್ ರಾಮಲಿಂಗಯ್ಯ ಮಾತನಾಡಿ ಅಧಿಕಾರಕ್ಕೆ ಬರುವ ಮುನ್ನ ದಲಿತ ಪರ ದಲಿತರ ಧ್ವನಿಯಾಗಿ ಶ್ರಮಿಸುತ್ತೇವೆ ಎಂದು ವಾಗ್ದಾನ ಮಾಡುವ ಸರ್ಕಾರಗಳು ಅಧಿಕಾರಕ್ಕೆ ಬಂದ ಕೂಡಲೇ ಸಂಪೂರ್ಣ ದಲಿತ ವಿರೋಧಿ ಕಾರ್ಯಗಳನ್ನು ಮಾಡಲು ಮುಂದಾಗುವುದು ವಿಪರ್ಯಾಸವೇ ಸರಿ ಸ್ಥಳೀಯ ಗ್ರಾಮಗಳಲ್ಲಿ ಬಡ ಕುಟುಂಬಗಳು ಸಾಕಷ್ಟಿವೆ ಸೂಕ್ತ ಸ್ಥಳವನ್ನು ಗುರುತಿಸಿ ಬಡ ಕುಟುಂಬಗಳಿಗೆ ನಿವೇಶನಗಳನ್ನು ಹಂಚಿಕೆ ಮಾಡಬೇಕೆಂದು ಮನವಿ ಮಾಡಿದರು.

ಸಂಘಟನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಜೈ ಭೀಮ್ ಮಂಜುನಾಥ್ ಮಾತನಾಡಿ ತಾಲ್ಲೂಕಿನ ಐಯ್ಯಮ್ಮನಹಳ್ಳಿಯಲ್ಲಿ ಮಕ್ಕಳಿಗೆ ಅಂಗನವಾಡಿ ಕೇಂದ್ರದ ಕೊರತೆಯಿದ್ದು ಮಕ್ಕಳ ಪ್ರಾಥಮಿಕ ಬೆಳವಣಿಗೆಗೆ ಸಹಕಾರಿಯಾಗುವ ಅಂಗನವಾಡಿ ಕೇಂದ್ರವನ್ನು ಸ್ಥಾಪಿಸಲು ಮನವಿ ಮಾಡಿದರು
ಸ್ಥಳೀಯ ಗ್ರಾಮದ ನಾಗರಿಕರಿಗೆ
ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಹಾಗೂ ರಸ್ತೆ, ಚರಂಡಿಗಳ ವ್ಯವಸ್ಥೆ ಬೀದಿ ದೀಪಗಳ ಕೊರತೆ ಇದ್ದು ಸರಿಪಡಿಸುವಂತೆ ಕೋರಿದರು.


ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕರು ಗುರು ಪ್ರಸಾದ್. ಬೆಂಗಳೂರು ಕಾರ್ಯದರ್ಶಿ ರಮೇಶ್, ಮದುಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ದಾಳಪ್ಪ, ನೆಲಮಂಗಲ ತಾಲ್ಲೂಕು ಅಧ್ಯಕ್ಷ ಕುಮಾರ್ ಸೇರಿದಂತೆ ಜಿಲ್ಲೆಯ ಹಲವು ದಲಿತ ಮುಖಂಡರು,ಪ್ರಗತಿಪರ ಚಿಂತಕರು, ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು .

ಪುರುಷೋತ್ತಮ ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ಜಿಲ್ಲೆ

144
13735 views

Comment