logo

ತುಮಕೂರು: ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ಕೊಡಿ ಎಂದು ಹೆತ್ತ ತಾಯಿ ಅಳಲು ತೋಡಿಕೊಂಡಿರುವ ಘಟನೆ ತುಮಕೂರು (Tumakuru) ಜಿಲ್ಲೆ ತುರುವೇಕೆರೆ (Turuvekere) ಪಟ್ಟಣದಲ್ಲಿ

ತುಮಕೂರು: ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ಕೊಡಿ ಎಂದು ಹೆತ್ತ ತಾಯಿ ಅಳಲು ತೋಡಿಕೊಂಡಿರುವ ಘಟನೆ ತುಮಕೂರು (Tumakuru) ಜಿಲ್ಲೆ ತುರುವೇಕೆರೆ (Turuvekere) ಪಟ್ಟಣದಲ್ಲಿ ನಡೆದಿದೆ.

ತುರುವೇಕೆರೆ ಪಟ್ಟಣದಲ್ಲಿ ಸಣ್ಣ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿರುವ ರೇಣುಕಮ್ಮ ಎಂಬ ಮಹಿಳೆಯ 20 ವರ್ಷ ವಯಸ್ಸಿನ ಮಗ ಅಭಿ ಕೆಟ್ಟ ಸ್ನೇಹಿತರ ಸಹವಾಸಕ್ಕೆ ಬಿದ್ದು ಕಲಿಯಬಾರದ ಚಟಗಳನ್ನೆಲ್ಲಾ ಕಲಿತಿದ್ದಾನೆ. ಚಟಗಳಿಂದ ಮುಕ್ತಗೊಳಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದೇನೆ. ಆದರೂ ಪ್ರಯೋಜನವಾಗಿಲ್ಲ. ಪಟ್ಟಣದಲ್ಲಿ ಗಾಂಜಾ ಸೇರಿದಂತೆ ಹಲವಾರು ಮಾದಕ ವಸ್ತುಗಳು ಮಾರಾಟವಾಗುತ್ತಿವೆ. ಇದು ಯುವಕರನ್ನು ಹಾಳು ಮಾಡುತ್ತಿದೆ. ನನ್ನ ಮಗನೂ ಇಂತಹ ಜಾಲಕ್ಕೆ ಬಿದ್ದು ತನ್ನ ಜೀವನವನ್ನು ಹಾಳು ಮಾಡಿಕೊಂಡಿದ್ದಾನೆ. ಹೀಗೆ ಪಟ್ಟಣದಲ್ಲಿ ಸಾಕಷ್ಟು ಯುವಕರಿದ್ದಾರೆ. ಇವರಿಗೆ ಮಾದಕ ವಸ್ತುಗಳನ್ನು ಸಾಗಾಣೆ ಮಾಡುತ್ತಿರುವವರು ಯಾರು ಎಂಬುದನ್ನು ದಯಮಾಡಿ ಪತ್ತೆ ಹಚ್ಚಿ ಅಮಾಯಕರನ್ನು ಕಾಪಾಡಿ ಎಂದು ರೇಣುಕಮ್ಮ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: #karnataka #tumkur #news #NewsUpdate #sptumkur #police

82
2037 views