logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಹೊಸದುರ್ಗದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಗರ ಬಸ್ ಸೇವೆ ಒದಗಿಸುವ ಭರವಸೆ – ಶಾಸಕ ಬಿ.ಜಿ. ಗೋವಿಂದಪ್ಪ

*ಹೊಸದುರ್ಗ ಪಟ್ಟಣದ ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಇಂದು ಗಾಂಧೀಜಿ ಅಧ್ಯಕ್ಷತೆಯ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ತುಂಬಿದ ಗಾಂಧೀ ಭಾರತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಹೊಸದುರ್ಗ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ "ಜೈ ಬಾಪೂ, ಜೈ ಭೀಮ್, ಜೈ ಸಂವಿಧಾನ" ಕಾರ್ಯಕ್ರಮವು ಡಿ.ದೇವರಾಜ ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕೀರ್ತಿಗಣೇಶ್ ಅವರ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನಡೆಯಿತು*

*ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಟ್ಟಣದ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿ ಟಿ.ಬಿ.ವೃತ್ತ ಮಾರ್ಗವಾಗಿ ಸಿದ್ಧರಾಮೇಶ್ವರ ಸಮುದಾಯ ಭವನದವರೆಗೂ ವಿವಿಧ ಕಾಲೇಜಿನ ಸುಮಾರು ಸಾವಿರಕ್ಕೂ ಹೆಚ್ಚೂ ವಿದ್ಯಾರ್ಥಿಗಳಿಂದ ಸಂವಿಧಾನ ಪೀಠಿಕೆ,ಗಾಂಧೀಜಿ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ರವರ ಭಾವಚಿತ್ರವನ್ನಿಡಿದು ಜಾಗೃತಿ ಜಾಥಾ ಮಾಡಲಾಯಿತು*

*ಬಳಿಕ ವೇದಿಕೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಸಿ ಮಾತನಾಡಿದ ಶಾಸಕ ಬಿ.ಜಿ.ಗೋವಿಂದಪ್ಪ ಪಟ್ಟಣದ ಶಾಲಾ-ಕಾಲೇಜುಗಳಿಗೆ ವಿದ್ಯಾಭ್ಯಾಸಕ್ಕೆಂದು ತಾಲೂಕಿನ ಮೂಲೆ-ಮೂಲೆಗಳಿಂದ ನಿತ್ಯ ಸಾವಿರಾರು ವಿದ್ಯಾರ್ಥಿಗಳು ಬರುತ್ತಾರೆ, ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಾಗೂ ವಸತಿ ನಿಲಯಗಳಿಂದ ಕಾಲೇಜುಗಳಿಗೆ ತೆರಳಬೇಕಾದರೆ 2-3 ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ಹೋಗಬೇಕಾದ ಅನಿವಾರ್ಯತೆಯಿದೆ, ಹೊಸದುರ್ಗ ನಗರದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಇದರಿಂದಾಗಿ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಿದೆ,ಈ ಉದ್ದೇಶದಿಂದ ಸಧ್ಯದಲ್ಲೇ ಹೊಸದುರ್ಗ ಪಟ್ಟಣದಲ್ಲಿ ನಿತ್ಯವೂ ಶಾಲಾ-ಕಾಲೇಜುಗಳ ಸಮಯಕ್ಕೆ ನಗರ ಬಸ್ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು ಹಾಗೂ ದೇಶದ ಭವಿಷ್ಯವನ್ನು ರೂಪಿಸಬೇಕಾದ ಹೊಣೆಗಾರಿಕೆ ಮತ್ತು ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ, ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಒಂದು ಪಕ್ಷದ ಕೆಳಗೆ ಕೆಲಸ ಮಾಡುತ್ತಿದ್ದು, ಸಂಘಟನೆಯ ಮೂಲಕ ದೇಶಕ್ಕೆ ವಿಪತ್ತು ಬಂದಾಗ ಎದೆಗುಂದದೆ ಧೈರ್ಯವಾಗಿ ನಿಂತು ರಕ್ಷಣೆಮಾಡುವ ಕಾರ್ಯ ಮಾಡಬೇಕು, ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆವಹಿಸಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕಳೆದ 2 ತಿಂಗಳ ಹಿಂದೆಯೇ ರಾಜ್ಯ ಸರ್ಕಾರದಿಂದ ಗಾಂಧಿ ಭಾರತ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು ಅದರಂತೆಯೇ ಹೊಸದುರ್ಗದಲ್ಲಿಯೂ ಎನ್.ಎಸ್‌.ಯು.ಐ ವತಿಯಿಂದ ಕಾರ್ಯಕ್ರಮ ಮಾಡಲಾಗುತ್ತಿದೆ, ನಾವು ಓದುತ್ತಿದ್ದಾಗ ಪಠ್ಯ ಪುಸ್ತಕದಲ್ಲಿ ಗಾಂಧಿ, ನೆಹರು, ಅಂಬೇಡ್ಕರ್ ಮತ್ತು ಇನ್ನಿತರ ಸಾಧಕರ ಜೀವನ ಮತ್ತು ಸಾಧನೆ ಬಗ್ಗೆ ತಿಳಿಸಲಾಗುತ್ತಿತ್ತು. ಇತ್ತೀಚೆಗೆ ಅವರೆಲ್ಲರೂ ಕಾಣೆಯಾಗುತ್ತಿದ್ದಾರೆ. ಗಾಂಧಿ ಎಂದರೆ ಯಾರು? ಅಂಬೇಡ್ಕರ್ ಎಂದರೆ ಯಾರು ಎನ್ನುವಂತಹ ಸ್ಥಿತಿ ಬಂದಿದೆ. ಮಹಾತ್ಮ ಗಾಂಧೀಜಿ ತಂದುಕೊಟ್ಟ ಸ್ವಾತಂತ್ರ್ಯ ಮತ್ತು ಸಂವಿಧಾನ ಬರೆದುಕೊಟ್ಟ ಅಂಬೇಡ್ಕರ್ ರವರನ್ನು ಎಂದಿಗೂ ಮರೆಯುವಂತಿಲ್ಲ. ಸಂವಿಧಾನದ ಆಶಯಗಳನ್ನು ನೆನಪಿಟ್ಟುಕೊಳ್ಳಲೆಂದು ಈ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು*


*ನಂತರ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕೀರ್ತಿಗಣೇಶ್‌, ಕೆ.ಪಿ.ಸಿ.ಸಿ. ವಕ್ತಾರರು ಹಾಗೂ ವಕೀಲರಾದ ಸುಧೀರ್ ಕುಮಾರ್ ಮುರೊಳ್ಳಿ ಹಾಗೂ ಕೆಪಿಸಿಸಿ ಸದಸ್ಯರಾದ ಅಲ್ತಾಫ್‌ ಪಾಷಾರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು*

*ಇನ್ನೂ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಯುವ ಮುಖಂಡ ಬಿ.ಜಿ.ಅರುಣ್ , ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಕಿರಣ್ ಯಾದವ್, ತಾಲೂಕು ಅಧ್ಯಕ್ಷ ಪವನ್ ಕುಮಾರ್, ಉಪಾಧ್ಯಕ್ಷ ಕೆ.ಲೋಹಿತ್, ಪದಾಧಿಕಾರಿಗಳಾದ ರೂಪೇಶ್, ಮುದ್ದುರಾಜ್, ಜಮೀರ್, ದಿನೇಶ್,ಪ್ರದೀಪ್, ಮಂಜುನಾಥ್, ಸಿದ್ದೇಶ್ ಹಾಗೂ ಸರ್ಫರಾಜ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು*

156
7247 views

Comment