logo

ಮರಳಿ ಗೂಡಿಗೆ ಬಂದ ಭವಾನಿ ರೇವಣ್ಣ

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ’ ಎಂಬ ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ಭವಾನಿ ರೇವಣ್ಣ ಅವರಿಗೆ ನೀಡಲಾಗಿದ್ದ ಜಾಮೀನಿನ ಷರತ್ತುಗಳನ್ನು ಹೈಕೋರ್ಟ್‌ ಸಡಿಲಿಸಿಲಿ, ಹಾಸನಕ್ಕೆ ಪ್ರವೇಶಿಸಲು ಅನುಮತಿ ನೀಡಿದ್ದು, ಈ ಸಂಬಂಧ ಸುಮಾರು 10 ತಿಂಗಳ ನಂತರ ಭವಾನಿ ರೇವಣ್ಣ ಹೊಳೆನರಸೀಪುರಕ್ಕೆ ವಾಪಾಸ್ ಆಗಿದ್ದಾರೆ. ಜೆಡಿಎಸ್‌ ಕಾರ್ಯಕರ್ತರು ಅಭಿಮಾನಿಗಳು ಆರತಿ ಎತ್ತಿ, ಪುಷ್ಪಾರ್ಚನೆ ಮಾಡುವ ಮೂಲಕ ಅದ್ದೂರಿ ಸ್ವಾಗತ ನೀಡಿದರು.

ಅತ್ಯಾಚಾರ ಸಂತ್ರಸ್ತೆಯ ಅಪಹರಣ ಕೇಸ್ ನಲ್ಲಿ ಆರೋಪಿ ಯಾಗಿದ್ದ ಭವಾನಿರೇವಣ್ಣ ನ್ಯಾಯಲಯ ದಿಂದ ನೀರಿಕ್ಷಣಾ ಜಾಮೀನನ್ನು ಪಡೆದುಕೊಂಡಿದ್ದರು ಆದರೆ ಹೈಕೋರ್ಟ್ ಜಾಮೀನನ್ನು ನೀಡುವಾಗ ಕೆಲವು ನಿರ್ಬಂಧಗಳನ್ನು ವಿಧಿಸಿತ್ತು ಅದರಲ್ಲಿ ಆರೋಪಿಯಾದ ಭವಾನಿ ರೇವಣ್ಣ ಹಾಸನಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಿತ್ತು.
ಈ ಸಂಬಂಧ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರು ಶುಕ್ರವಾರ ವಿಚಾರಣೆ ನಡೆಸಿ ಷರತ್ತುಗಳನ್ನು ಸಡಿಲಿಸಿ ಆದೇಶಿಸಿದರು.
ಈ ಮೂಲಕ ಭವಾನಿ ಅವರಿಗೆ ಮೈಸೂರು ಮತ್ತು ಹಾಸನಕ್ಕೆ ಪ್ರವೇಶಿಸಲು ಅನುಮತಿ ನೀಡಿರುವ ನ್ಯಾಯಪೀಠ ‘ಭವಾನಿ ಅವರು ಪ್ರಕರಣದ ಸಂತ್ರಸ್ತೆ ಮತ್ತು ಸಾಕ್ಷಿಗಳು ವಾಸಿಸುವ ಸ್ಥಳದಿಂದ 500 ಮೀಟರ್‌ ವ್ಯಾಪ್ತಿಯಲ್ಲಿ ಓಡಾಡುವಂತಿಲ್ಲ. ಆದೇಶ ಉಲ್ಲಂಘಿಸಿದರೆ ನ್ಯಾಯಾಲಯದ ಮೆಟ್ಟಿಲೇರಲು ಸರ್ಕಾರ ಸ್ವತಂತ್ರವಾಗಿರುತ್ತದೆ’ ಎಂದು ಸ್ಪಷ್ಟಪಡಿಸಿದೆ.
ಸಂತ್ರಸ್ತೆ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್‌.ನಗರ ಠಾಣೆಯಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಭವಾನಿ ಸೇರಿದಂತೆ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ತನಿಖೆ ನಡೆಸುತ್ತಿರುವ ಎಸ್‌ಐಟಿ ವಿಚಾರಣಾ ನ್ಯಾಯಾಲಯಕ್ಕೆ ಈಗಾಗಲೇ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದೆ.

0
1067 views