ಹಾವೇರಿ: ಸಿಡಿಲು ಬಡಿದು 30 ಕುರಿ ಸಾವು
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಹೊಲಬಿಕೊಂಡ ಗ್ರಾಮದಲ್ಲಿ 40 ಕುರಿಗಳು ಮೃತಪಟ್ಟ ಸ್ಥಳಕ್ಕೆ ಶಾಸಕ ಯು.ಬಿ. ಬಣಕಾರ ಬುಧವಾರ ರಾತ್ರಿ ಭೇಟಿ ನೀಡಿದರು
ಹಾವೇರಿ: ಜಿಲ್ಲೆಯ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲ್ಲೂಕಿನ ಹಲವೆಡೆ ಬುಧವಾರ ಗುಡುಗು-ಸಿಡಿಲು ಸಮೇತ ಜೋರು ಮಳೆಯಾಗಿದೆ.
ಜಿಲ್ಲೆಯಾದ್ಯಂತ ಬುಧವಾರ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣ ಇತ್ತು. ಗುಡುಗು-ಸಿಡಿಲಿನ ಅಬ್ಬರ ಜೋರಾಗಿತ್ತು.
ಹಿರೇಕೆರೂರು ತಾಲ್ಲೂಕಿನ ಹೊಲಬಿಕೊಂಡ ಗ್ರಾಮದಲ್ಲಿ ಸಿಡಿಲು ಬಡಿದು 30 ಕುರಿಗಳು ಮೃತಪಟ್ಟಿದ್ದು, ಸ್ಥಳಕ್ಕೆ ಶಾಸಕ ಯು.ಬಿ. ಬಣಕಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
'ಹಾನಗಲ್ ತಾಲ್ಲೂಕಿನ ಕುರಿಗಾಹಿ ಈಟೇಪ್ಪ ಬನ್ನಿ ಅವರು ಹೊಲಬಿಕೊಂಡ ಗ್ರಾಮದಲ್ಲಿ ಕುರಿಗಳ ಸಮೇತ ತಂಗಿದ್ದರು. ಜೋರು ಮಳೆ ಬಂದು, ಸಿಡಿಲು ಬಡಿದು 30 ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ' ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕುರಿಗಳ ಸಾವಿನ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹಿರೇಕೆರೂರು ಠಾಣೆ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. ಸೂಕ್ತ ಪರಿಹಾರ ಕೊಡಿಸುವಂತೆ ಕುರಿಗಾಹಿಗಳು ಆಗ್ರಹಿಸಿದ್ದಾರೆ.