logo

ರಸ್ತೆ ಸುಗಮಗಮಗೊಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ . ಡಾ.ಶ್ರೀನಿವಾಸ್.ಎನ್. ಟಿ.

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ದಿ; 24-04-2025 ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಲೋಕೋಪಯೋಗಿ ಇಲಾಖೆಯ ತಾಲೂಕು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಮಾನ್ಯ ಶಾಸಕರು ಅಧಿಕಾರಿಗಳ ಜೊತೆ ಮಾತನಾಡುತ್ತಾ, ನಮ್ಮ ಕ್ಷೇತ್ರದ ಪ್ರತಿ ಹಳ್ಳಿಗಳ ರಸ್ತೆಗಳನ್ನು ಸುಗಮಗೊಳಿಸುವ ನಿಟ್ಟಿನಲ್ಲಿ, ಬಾಕಿ ಉಳಿದ ರಸ್ತೆಯ ಕಾಮಗಾರಿಯನ್ನು ಕೂಡಲೇ ಬಗೆಹರಿಸುಬೇಕು. ನಮ್ಮಲ್ಲಿ ಕುಗ್ರಾಮ ಮತ್ತು ಗಡಿಗ್ರಾಮಗಳು ಎನ್ನದೇ ರಸ್ತೆಗಳನ್ನು ಕಲ್ಪಿಸಿಕೊಡುವುದರ ಮೂಲಕ ಸಾಮಾಜಿಕ ಸುಧಾರಣೆಗೆ ಒತ್ತು ಕೊಡಬೇಕು. ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಿ, ನಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ನನ್ನೊಂದಿಗೆ ಕೈ ಜೋಡಿಸಬೇಕು ಎಂದೂ ವಿಚಾರ ಮಾಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು, ಆಪ್ತ ಸಹಾಯಕರು ಉಪಸ್ಥಿತರಿದ್ದರು.

0
16 views