ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು: ಎಸ್‌ಡಿಪಿಐ
ಅಬು ನ್ಯೂಸ್: ಪಹೆಲ್ಗಾಂ ನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ ಎಸ್‌ಡಿಪಿಐ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಟ್ಟಣದ ಲಯನ್ಸ್ ವೃತ್ತದಲ್ಲಿ ಮೊಂಬತ್ತಿ ಬೆಳಗಿ ಪ್ರತಿಭಟಿಸಲಾಯಿತು. ಪಕ್ಷದ ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ಮಾತನಾಡಿ, ಈ ಹಿಂದೆ ಪುಲ್ವಾಮಾದಲ್ಲಿ ನಡೆದ ದಾಳಿಯಿಂದ ಎಚ್ಚೆತ್ತುಕೊಳ್ಳದ ಕೇಂದ್ರ ಸರ್ಕಾರ, ದೇಶದ ಗಡಿಗಳನ್ನು ಭದ್ರಪಡಿಸದೆ ಇರುವುದೇ ಈ ಘಟನೆಗೆ ಕಾರಣ. ದಾಳಿಯ ಹೊಣೆಯನ್ನು ಹೊತ್ತು ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ₹50 ಲಕ್ಷ ಪರಿಹಾರ ನೀಡಬೇಕು ಎಂದರು.