ಡಾಬಾ ಸುರೇಶ್ ನಾಯ್ಕ್ ಅವರು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ನೇಮಕ
ಚಿಕ್ಕನಾಯಕನಹಳ್ಳಿ: ಡಾಬಾ ಸುರೇಶ್ ನಾಯ್ಕ್ ಅವರನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ನೂತನವಾಗಿ ನೇಮಕ ಮಾಡಲಾಗಿದೆ.
ಈ ಸಂದರ್ಭ, ಮಾಜಿ ಶಾಸಕ ಕೆ.ಎಸ್. ಕಿರಣ್ ಕುಮಾರ್, ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಹಾಗೂ ಹುಳಿಯಾರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಟಿ. ಚಿಕ್ಕಣ್ಣ ಅವರು ನೂತನ ಅಧ್ಯಕ್ಷರಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಭೂನ್ಯಾಯ ಮಂಡಳಿಯ ನಾಮಿನಿ ಸದಸ್ಯ ಅಗಸರಹಳ್ಳಿ ನರಸಿಂಹಮೂರ್ತಿ, ಪುರಸಭೆ ಆಶ್ರಯ ನಾಮಿನಿ ಸದಸ್ಯ ರಮೇಶ್, ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ಮೊಹಮ್ಮದ್ ಜಾಕಿರ್ ಹಾಗೂ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಸದಸ್ಯ ಚಿಕ್ಕತಿಮ್ಮಯ್ಯ ಉಪಸ್ಥಿತರಿದ್ದರು.
ಅವೇಳೆ, ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಅವರು ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದರು. ಅವರು, ಪಕ್ಷದ ಬಲವರ್ಧನೆಗೆ ಇಂತಹ ನೇಮಕಾತಿಗಳು ಮುಖ್ಯವಲ್ಲದೆ, ಹೊಸ ಮುಖಗಳಿಗೆ ಅವಕಾಶ ನೀಡುವ ಮೂಲಕ ಸಂಘಟನೆ ಇನ್ನಷ್ಟು ಬಲಿಷ್ಠವಾಗಲಿದೆ ಎಂದು ಅಭಿಪ್ರಾಯಪಟ್ಟರು.