logo

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನೆ ಮೇಲೆ ಲೋಕಾಯುಕ್ತ ದಾಳಿ

ವಿಜಯನಗರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ನಡೆದಿದೆ.

ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಷ್ಮಣ್ಮುಖ ಗೌಡ ಕಡ್ಡಿರಾಂಪುರದಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ರಜನಿ ಅವರ ಅಳಿಯ ಮಾರಿತಿ ಬೆಂಗಳೂರು ಬಿಬಿಎಂಪಿಯಲ್ಲಿ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಮಾರುತಿ ಅವರ ಅತ್ತೆ ರಜನಿ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ.

55
4062 views