ಡಾ ಸಾಸಲು ಸತೀಶ್ ನೇತೃತ್ವದಲ್ಲಿ ಕಾಡುಗೊಲ್ಲ ಸಮುದಾಯ ಜಾಗೃತಿ ಕಾರ್ಯಕ್ರಮ
ಚಿಕ್ಕನಾಯಕನಹಳ್ಳಿ: ಕಾಡುಗೊಲ್ಲ ಸಮುದಾಯದವರನ್ನು ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಜಾತಿ ಕಾಲಂ ಹಾಗೂ ಉಪಜಾತಿ ಕಾಲಂ ಎರಡರಲ್ಲೂ ಕಾಡುಗೊಲ್ಲ ಎಂದು ಬರೆಸಿಕೊಳ್ಳಬೇಕೆಂದು ಜಾಗೃತಿ ಮೂಡಿಸಲು ಕಾರ್ಯಕ್ರಮ ಏರ್ಪಡಿಸಲಾಯಿತು.
ಕಾಂಗ್ರೆಸ್ ಮುಖಂಡ ಸಾಸಲು ಸತೀಶ್ ಅವರ ಮುಂದಾಳತ್ವದಲ್ಲಿ ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಗೊಲ್ಲರಟ್ಟಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ಹಲವು ಗೊಲ್ಲರಹಟ್ಟಿಗಳಿಗೆ ಭೇಟಿ ನೀಡಿ ಸಮುದಾಯದ ಜನರಲ್ಲಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಸಮುದಾಯದ ಅನೇಕ ಮುಖಂಡರುಗಳು ಭಾಗವಹಿಸಿ, ಕಾಡುಗೊಲ್ಲ ಸಮುದಾಯದ ಒಗ್ಗಟ್ಟು ಮತ್ತು ಹಕ್ಕುಗಳ ಬಗ್ಗೆ ಜನರಿಗೆ ಜಾಗೃತಿ ನೀಡಿದರು.
---