logo

*ಜ್ಞಾನವಿಕಾಸ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ*

ಚಿಕ್ಕಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಚಿಕ್ಕ ಬಳ್ಳಾಪುರ ತಾಲೂಕು, ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ,ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ ಇವರ ಸಹಯೋಗದಲ್ಲಿ ಇಂದು ಮಹಿಳಾ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ "ಮುಂದಿನ ಪೀಳಿಗೆಗೆ ಸಂಸ್ಕಾರ ಮತ್ತು ಸಂಸ್ಕೃತಿ ಉಳಿಸುವಲ್ಲಿ ಮಹಿಳೆಯ ಪಾತ್ರ" ಎಂಬ ವಿಚಾರ ಕುರಿತು ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಚಿಕ್ಕಬಳ್ಳಾಪುರ ಜಿಲ್ಲಾ ಗೌರವಾನ್ವಿತ ಪ್ರಧಾನ ಮತ್ತು ಜಿಲ್ಲಾ ನ್ಯಾಯಾಧೀಶರಾದ ಶ್ರೀಮತಿ ನೇರಳೆ ವೀರಭದ್ರ ಭವಾನಿ ಯವರು ಉದ್ಘಾಟಿಸಿ, ಮಹಿಳೆಯರು ಅಭಿವೃದ್ಧಿ ಆಗಲು ಜ್ಞಾನ ಬಹಳ ಮುಖ್ಯ.ಜ್ಞಾನ ಎಂಬುವುದು ಅಳಿಸಲಾರದ ಸಂಪತ್ತು.ಜ್ಞಾನ ಅರಿಯಲು ನಾವು ಬೆಳೆಯುವ ವಾತಾವರಣ ಸರಿಯಾಗಿರಬೇಕು.ಹಿಂದೆ ಗಂಡು ಹೆಣ್ಣು ಎಂಬ ಭೇದ ಭಾವ ಇತ್ತು. ಈಗ ಗಂಡು ಹೆಣ್ಣು ಸಮಾನರಾಗಿದ್ದಾರೆ.ಹಿರಿಯರ ಮಾತಿಗೆ ಬೆಲೆಕೊಟ್ಟು ಸಂಸ್ಕಾರ ಸಂಸ್ಕೃತಿಯನ್ನು ಕಲಿತಾಗ ನಾವು ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ. ಈ ನಿಟ್ಟಿನಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರು ಜ್ಞಾನ ವಿಕಾಸ ಕಾರ್ಯಕ್ರಮ ಮಾಡಿ ಮಹಿಳೆಯರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ತಮ್ಮ ಉದ್ಘಾಟನೆಯ ನುಡಿಯನ್ನು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾನ್ವಿತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು ಶ್ರೀ ರವೀಂದ್ರ ಪಿ ಎನ್ ಭಾ.ಆ.ಸೇ ರವರು ವಹಿಸಿದ್ದರು.ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಗೌರವಾನ್ವಿತ ಜಿಲ್ಲಾಧಿಕಾರಿಗಳು,ಮುಂದಿನ ಪೀಳಿಗೆಗೆ ಸಂಸ್ಕೃತಿ ಸಂಸ್ಕಾರ ಉಳಿಸುವಲ್ಲಿ ತಾಯಂದಿರ ಪಾತ್ರ ಮಹತ್ವದ್ದಾಗಿದೆ.ತಾಯಿ ತನ್ನ ಮಕ್ಕಳಿಗೆ ಪ್ರಾರಂಭಿಕ ಹಂತದಲ್ಲೇ ಪಾಠದೊಂದಿಗೆ ಸಂಸ್ಕಾರವನ್ನು ಕಲಿಸಿದಾಗ ಮಕ್ಕಳು ಪ್ರಜ್ಞಾವಂತರಾಗುತ್ತಾರೆ. ಉಳಿತಾಯ ಮಾಡುವುದರೊಂದಿಗೆ,ಪಡೆದ ಸಾಲವನ್ನು ಸಮರ್ಪಕವಾಗಿ ಹಿಂದಿರುಗಿಸಿದಾಗ ಆರ್ಥಿಕ ಆರ್ಥಿಕ ಶಿಸ್ತು ಬರುತ್ತದೆ.ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಏಳಿಗೆಗೆ ಶ್ರಮಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ನವೀನ್ ಭಟ್ ವೈ,ಶ್ರೀಮತಿ ಶಿಲ್ಪಾ ಬಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಶ್ರೀ ವೆಂಕಟೇಶ ರೆಡ್ಡಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಚಿಕ್ಕಬಳ್ಳಾಪುರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಅಧ್ಯಕ್ಷರಾದ ಯಲುವಹಳ್ಳಿ ರಮೇಶ್ ರವರು ಶುಭ ಹಾರೈಸಿದರು.

ಜ್ಞಾನವಿಕಾಸ ಕಾರ್ಯಕ್ರಮದ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ಸಿ ಎಸ್ ರವರು ಪ್ರಾಸ್ತಾವಿಕವಾಗಿ ಮಾತಾಡಿದರು.

ಚಿಕ್ಕಬಳ್ಳಾಪುರದ ಸಮ್ವಿತ ಶಾಲೆಯ ಶೈಕ್ಷಣಿಕ ಸಲಹೆಗಾರರು ಹಾಗೂ ಸಮಾಲೋಚಕರಾದ ಶ್ರೀಮತಿ ಕೆ ಆರ್ ಕಲಾವತಿಯವರು ಮುಂದಿನ ಪೀಳಿಗೆಗೆ ಸಂಸ್ಕಾರ ಮತ್ತು ಸಂಸ್ಕೃತಿ ಉಳಿಸುವಲ್ಲಿ ಮಹಿಳೆಯ ಪಾತ್ರದ ಕುರಿತು ಮಹಿಳಾ ವಿಚಾರಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದರು.


ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕ ಮಹಿಳೆಯರನ್ನು ಗುರುತಿಸಿ ಅಭಿನಂದಿಸಲಾಯಿತು.
ವಾತ್ಸಲ್ಯ ವಿದ್ಯಾನಿಧಿ,ಸುಜ್ಞಾನನಿಧಿ ಶಿಷ್ಯ ವೇತನ ವನ್ನು ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ನಿರ್ಗತಿಕರಿಗೆ ಮಾಶಾಸನ ವಿತರಣೆ ಮಾಡಲಾಯಿತು.

ಚಿಕ್ಕಬಳ್ಳಾಪುರ ತಾಲೂಕು ಯೋಜನಾಧಿಕಾರಿಗಳಾದ ಕೆ ವಿನಾಯಕ ಪೈ ಯವರು ಸ್ವಾಗತಿಸಿದರು.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಕರಾದ ಶ್ರೀ ರಾಮೇಗೌಡ ರವರು ಧನ್ಯವಾದ ನೀಡಿದರು.
ಮಂಜುಳಾ ಮತ್ತು ಗೋಪಾಲ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

3
41 views