logo

ಮಳೆ ಹಾನಿ ಸಂಬಂಧಿಸಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಬೆಳೆ ಹಾನಿ ಪ್ರದೇಶಗಳ ಬೇಟಿಯ ಸಲುವಾಗಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ನೇಸರ್ಗಿ ಗ್

ಮಳೆ ಹಾನಿ ಸಂಬಂಧಿಸಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಬೆಳೆ ಹಾನಿ ಪ್ರದೇಶಗಳ ಬೇಟಿಯ ಸಲುವಾಗಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ನೇಸರ್ಗಿ ಗ್ರಾಮದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭ.

ವಿರೋಧ ಪಕ್ಷದ ನಾಯಕರಾದ ಶ್ರೀ R Ashoka, ಸಂಸದರಾದ ಶ್ರೀ ರಮೇಶ್ ಜಿಗಜಿಣಗಿ, ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀಮತಿ Shashikala Jolle , ಶ್ರೀ ಸಿದ್ದು ಸವದಿ , ಶ್ರೀ ಅಭಯ್ ಪಾಟೀಲ್, ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಶ್ರೀ ಎನ್. ರವಿ ಕುಮಾರ್, ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್ ಹಾಗೂ ಇತರ ಮುಖಂಡರೊಂದಿಗೆ.

ಬೆಳಗಾವಿ ಜಿಲ್ಲೆಯ ಹಲವಾರು ಪ್ರದೇಶಗಳು ಅತಿವೃಷ್ಟಿಯಿಂದ ತತ್ತರಿಸಿ ಹೋಗಿದೆ. ಜನರು ಮನೆ ಮಠಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದರೆ ಜಿಲ್ಲಾ ಮಂತ್ರಿಗಳು ಸಹಕಾರಿ ಚುನಾವಣೆಯ ತಯಾರಿಯಲ್ಲಿದ್ದಾರೆ. ಅವರಾರಿಗೂ ಜನರ ಸಂಕಷ್ಟದ ಬಗ್ಗೆ ಕಳಕಳಿ ಇಲ್ಲ.ಅತಿವೃಷ್ಟಿ, ಅನಾವೃಷ್ಟಿ ಹಾಗೂ ಬೆಳೆ ಹಾನಿ ಪ್ರದೇಶಗಳ ಭೇಟಿಯ ಸಲುವಾಗಿ ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ತರಿಹಾಳ್ ಗ್ರಾಮದ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭ.

ವಿರೋಧ ಪಕ್ಷದ ನಾಯಕರಾದ ಶ್ರೀ R Ashoka, ಸಂಸದರಾದ ಶ್ರೀ ರಮೇಶ್ ಜಿಗಜಿಣಗಿ ,ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀಮತಿ Shashikala Jolle, ಶ್ರೀ ಸಿದ್ದು ಸವದಿ , ಶ್ರೀ ಅಭಯ್ ಪಾಟೀಲ್, ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಶ್ರೀ ಎನ್. ರವಿ ಕುಮಾರ್, ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್ ಹಾಗೂ ಇತರ ಮುಖಂಡರೊಂದಿಗೆ.

ಜೀವನಕ್ಕೆ ಆಸರೆಯಾಗಿದ್ದ ಜಾನುವಾರುಗಳು ಇಲ್ಲ. ಕಟ್ಟಿಕೊಂಡ ಸೂರು ಕಳೆದುಕೊಂಡು ಜನರು ಸಂಕಷ್ಟದಲ್ಲಿರುವ ಪರಿಸ್ಥಿತಿ ಎದುರಾಗಿದೆ. ಕಷ್ಟಪಟ್ಟು ದುಡಿದ ಬೆಳೆ ಎಲ್ಲವೂ ನೀರು ಪಾಲಾದ ಕಾರಣ ರೈತರು ಕಂಗಾಲಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ಇದರತ್ತ ಗಮನಹರಿಸಬೇಕು.

0
0 views