logo

ಪರಪ್ಪನ ಅಗ್ರಹಾರ ಜೈಲಲ್ಲಿ ಶಾಸಕರಾದ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿ ಭೇಟಿ ಮಾಡಿದ ಡಿಸಿಎಂ ಡಿ ಕೆ ಶಿವಕುಮಾರ್

ಪರಪ್ಪನ ಅಗ್ರಹಾರ ಜೈಲಲ್ಲಿ ಶಾಸಕರಾದ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿ ಭೇಟಿ ಮಾಡಿದ ಡಿಸಿಎಂ ಡಿ ಕೆ ಶಿವಕುಮಾರ್.

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಶುಕ್ರವಾರ ಭೇಟಿ ನೀಡಿ, ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿದರು.

ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರು ವಿಚಾರಣಾಧೀನ ಕೈದಿಗಳಾಗಿ ಜೈಲಲ್ಲಿದ್ದಾರೆ.

ಸಂಜೆ 4.30 ಕ್ಕೆ ಜೈಲಿಗೆ ಭೇಟಿ ನೀಡಿದ ಶಿವಕುಮಾರ್ ಅವರು ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು.

#ಪರಪ್ಪನಅಗ್ರಹಾರಜೈಲು #ಸಾಂತ್ವಾನ #ಕಾಕೈದಿಗಳಭೇಟಿ

1
199 views