logo

ರಾಷ್ಟ್ರೀಯ ರಸ್ತೆ ಸುರಕ್ಷಿತಾ ಅಭಿಯಾನಕ್ಕೆ ಚಾಲನೆ.


ಗೌರಿಬಿದನೂರು : ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ರಸ್ತೆ ಸುರಕ್ಷಿತ ಅಭಿಯಾನಕ್ಕೆ ಪ್ರಧಾನ ಸಿವಿಲ್ ನ್ಯಾಯಾಧೀಶ ಗಣೇಶ್ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು

ಪ್ರತಿಯೊಬ್ಬರ ಜೀವ ಅಮೂಲ್ಯವಾದದ್ದು, ಜೀವ ಇಲ್ಲದೇ ಹೋದರೆ ಎಷ್ಟೇ ಗಳಿಸಿದ್ದರೂ ಶೂನ್ಯ, 2024 ರ ಅಂಕಿ ಅಂಶಗಳನ್ನು ಗಮನಿಸಿದರೆ, 39345 ಅಪಘಾತ ಪ್ರಕರಣಗಳು ಸಂಭಾವಿಸಿದ್ದರೆ, ಅದರಲ್ಲಿ ಶೇ 25 ರಷ್ಟು ಪ್ರಕರಣಗಳು ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಇಲ್ಲದೇ ಇರುವುದರಿಂದ ಅಪಘಾತ ಸಂಭವಿಸಿ ಮರಣ ಹೊಂದಿರುತ್ತಾರೆ, ಒಂದು ವೇಳೆ ಸರಿಯಾದ ರಸ್ತೆ ಸುರಕ್ಷಿತ ಕ್ರಮಗಳನ್ನು ಅನುಸರಿಸಿದ್ದರೆ, ಪ್ರಾಣ ಉಳಿಯುವ ಸಾಧ್ಯತೆ ಹೆಚ್ಚಾಗಿರುತ್ತಿತ್ತು, ಆದ್ದರಿಂದ ವಾಹನ ಸವಾರರು ತಪ್ಪದೆ ರಸ್ತೆ ಸುರಕ್ಷಿತ ನಿಯಮಗಳನ್ನು ಪಾಲನೆ ಮಾಡಬೇಕು, ಒಂದು ತಿಂಗಳ ಕಾಲ ಈ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಗೌರವಾನ್ವಿತ ಹಿರಿಯ ಶ್ರೇಣಿ ನ್ಯಾಯಾಧೀಶೆಗೀತಾ ಕುಂಬಾರ್.ಕೆ.ಬಿ. ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪುಷ್ಪ. ಡಿ
ವಕೀಲರ ಸಂಘದ ಅಧ್ಯಕ್ಷ ದಿನೇಶ್ ಕುಮಾರ್,
ವೃತ್ತ ನಿರೀಕ್ಷಕ ಅಂಜನ್ ಕುಮಾರ್,
ಸರ್ಕಾರಿ ಅಭಿಯೋಜಕ ಫಯಾಜ್ ಪಟೇಲ್,
ಕಾರ್ಯದರ್ಶಿ ಲಿಂಗಪ್ಪ, ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ವಕೀಲರ ಸಂಘದ ಸದಸ್ಯರು, ಪದಾಧಿಕಾರಿಗಳು ಹಾಜರಿದ್ದರು.

0
0 views