ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧ ನೇಮಕ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧ ಭಾ.ಆ.ಸೇ ರವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಬಸವರಾಜು.ಎ.ಬಿ ಅವರ ವರ್ಗಾವಣೆಯಿಂದಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಸಯ ಸಲ್ಲಿಸುತ್ತಿದ್ದ ಡಾ.ಕೆ.ಎನ್.ಅನುರಾಧ ಅವರನ್ನು ಜಿಲ್ಲಾಧಿಕಾರಿಯಾಗಿ ಜಿಲ್ಲೆಗೆ ನೇಮಕ ಮಾಡಲಾಗಿದೆ. ಹಾಗೂ ಮುಂದಿನ ಆದೇಶದವರೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಮುಂದುವರೆಯಲಿದ್ದಾರೆ.