ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಘೋಡೆ ಖಂಡನೆ
ಬೀದರ್: ಪದೇ ಪದೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ತೀವ್ರ ಖಂಡನೀಯ ಎಂದು ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ಹೇಳಿದ್ದಾರೆ.ಹತ್ತು ದಿನಗಳಲ್ಲೇ ಮೂರು ಬಾರಿ ತೈಲ ಬೆಲೆ ಹೆಚ್ಚಿಸಿರುವುದು ಜನಸಾಮಾನ್ಯರಿಗೆ ಆಘಾತ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.ಇಂಧನ ಬೆಲೆ ಏರಿಕೆಯಿಂದ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕೃಷಿ ವೆಚ್ಚವೂ ಹೆಚ್ಚಾಗುತ್ತಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು, ರೈತರು, ಮಧ್ಯಮ ವರ್ಗದವರು ಬಹಳ ಸಂಕಷ್ಟ ಎದುರಿಸಬೇಕಾಗಿದೆ ಎಂದು ಹೇಳಿದ್ದಾರೆ.ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಬೇಕು. ಜನಸಾಮಾನ್ಯರ ಹಿತ ರಕ್ಷಣೆಗೆ ಈಗಾಗಲೇ ಮಾಡಲಾದ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.