logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಸಚಿವ ದರ್ಶನಾಪುರಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ : ಕಾಂಗ್ರೆಸ್ ಯುವ ಮುಖಂಡ ಶೇಖರ ಚಂಡು ಒತ್ತಾಯ

ಶಹಾಪುರ : ಮುಂಬರುವ ಸಂಪುಟ ಪುನಾರಚನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡರಾದ ಶೇಖರ ಚಂಡು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಕಳೆದ ಮೂರು ವರ್ಷಗಳಿಂದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾಗಿ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. ಶಹಾಪುರ ಮತಕ್ಷೇತ್ರದ ಸಮಗ್ರ ಅಭಿವೃದ್ಧಿ ಆದ್ಯತೆ ನೀಡುವುದರ ಜತೆಗೆ ಸರ್ವ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗಿರಿ ಜಿಲ್ಲೆಯ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದಿದ್ದಾರೆ. ಸಚಿವ ದರ್ಶನಾಪುರ ಅವರು ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಆಡಳಿತ ಮತ್ತು ಅಭಿವೃದ್ಧಿ ವಿಷಯದಲ್ಲಿ ಸಾಕಷ್ಟು ಅನುಭವವಿದೆ. ಸಿಎಂ ಸಿದ್ದರಾಮಯ್ಯ ಅವರು ನೀಡಿದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿದ್ದಾರೆ. ತಮ್ಮ ನಲವತ್ತು ವರ್ಷದ ರಾಜಕೀಯ ಇತಿಹಾಸದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಮಾಡಿ ಈ ಭಾಗದ ಬಡಜನರ ನೋವು, ನಲುವಿಗೆ ಸ್ಪಂದಿಸಿದ್ದಾರೆ. ಹಿರಿಯ ಅನುಭವಿ ರಾಜಕಾರಣಿಯಾಗಿರುವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ನೂತನ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ಈ ಭಾಗದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಮತ್ತು ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಲಿದೆ. ಇದೇ ಅಂಶವನ್ನು ಇಟ್ಟುಕೊಂಡು ದರ್ಶನಾಪುರ ಅವರಿಗೆ ಉನ್ನತ ಹುದ್ದೆ ಖಾತೆಯನ್ನು ವಹಿಸಲು ಕಾಂಗ್ರೆಸ್ ಹೈಕಮಾಂಡ್ ಒಲವು ತೋರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

7
549 views

Comment